Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:11
30 ತಿಳಿವುಗಳ ಹೋಲಿಕೆ  

ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.


ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಪಡೆದಿರಿ, ನಿಮ್ಮ ನಗರ ಹಲವಾರು ನಾಡುಗಳಿಗೆ ಮಾರುಕಟ್ಟೆಯಾಗಿತ್ತು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು".


ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.


ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು