ಯೆಶಾಯ 23:17 - ಕನ್ನಡ ಸತ್ಯವೇದವು C.L. Bible (BSI)17 ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಪ್ಪತ್ತು ವರುಷಗಳ ಮೇಲೆ ಯೆಹೋವನು ತೂರ್ ಎಂಬವಳಿಗೆ ನೇವಿುಸಲು ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಮಂಡಲದಲ್ಲಿ ಲೋಕದ ಸಕಲ ರಾಜ್ಯಗಳೊಂದಿಗೆ ಕಲೆಯುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಪ್ಪತ್ತು ವರ್ಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು. ಅಧ್ಯಾಯವನ್ನು ನೋಡಿ |