Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:6 - ಕನ್ನಡ ಸತ್ಯವೇದವು C.L. Bible (BSI)

6 ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ಕರಾವಳಿಯ ನಿವಾಸಿಗಳೇ, ಅಂಗಲಾಚಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಡಗುಗಳೇ, ನೀವು ತಾರ್ಷೀಷಿಗೆ ಹಿಂದಿರುಗಿರಿ! ಸಮುದ್ರ ತೀರದಲ್ಲಿ ವಾಸಿಸುವವರಾದ ನೀವು ದುಃಖಿಸಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:6
8 ತಿಳಿವುಗಳ ಹೋಲಿಕೆ  

“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.


ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”


ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.


ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು