Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:13 - ಕನ್ನಡ ಸತ್ಯವೇದವು C.L. Bible (BSI)

13 ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಣ್ಣೆಯ ಮರವನ್ನು ಬಡಿದ ಮೇಲೆಯೂ ದ್ರಾಕ್ಷೆಯ ಸುಗ್ಗಿಯು ತೀರಿದನಂತರವೂ ನಿಲ್ಲುವ ಉಳಿಗಾಯ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಶೇಷವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:13
19 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


“ಆ ದಿನದಂದು ಇಸ್ರಯೇಲಿನ ಕೊಬ್ಬು ಕರಗುವುದು. ಅದರ ಮಹಿಮೆ ಕ್ಷಯಿಸಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು