Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:14 - ಕನ್ನಡ ಸತ್ಯವೇದವು C.L. Bible (BSI)

14 ಆರ್ಭಟಿಸುವರು ಅಳಿದುಳಿದವರು ಆನಂದದಿಂದ, ಕೊಂಡಾಡುವರು ಸರ್ವೇಶ್ವರನ ಮಹಿಮೆಯನು ಪಡುವಣದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಉಚ್ಚಧ್ವನಿಗೈಯುವರು; ಯೆಹೋವನ ಮಹಿಮೆಯನ್ನು ತಿಳಿದುಕೊಂಡವರಾಗಿ ಸಮುದ್ರದ ಕಡೆಯಿಂದ ಆರ್ಭಟಿಸುವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು. ಪಶ್ಚಿಮ ದಿಕ್ಕಿನ ಕಡೆಯಿಂದ ಆರ್ಭಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:14
20 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಆ ದಿನದಲ್ಲಿ ಪೇಳ್ವರು ಸರ್ವೇಶ್ವರ : “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು