Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:16 - ಕನ್ನಡ ಸತ್ಯವೇದವು C.L. Bible (BSI)

16 ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸದ್ಧರ್ಮಿಗಳಿಗೆ ಮಾನವಾಗಲೆಂಬ ಗೀತಗಳು ಭೂಮಂಡಲದ ಕಟ್ಟಕಡೆಯಿಂದ ನಮಗೆ ಕೇಳಬಂದಿವೆ. ನಾನಾದರೋ - ಕ್ಷಯಿಸೇ ಕ್ಷಯಿಸುತ್ತೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:16
41 ತಿಳಿವುಗಳ ಹೋಲಿಕೆ  

ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.


ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.


“ಆ ದಿನದಂದು ಇಸ್ರಯೇಲಿನ ಕೊಬ್ಬು ಕರಗುವುದು. ಅದರ ಮಹಿಮೆ ಕ್ಷಯಿಸಿಹೋಗುವುದು.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.


ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II


ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು