Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:18 - ಕನ್ನಡ ಸತ್ಯವೇದವು C.L. Bible (BSI)

18 ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:18
26 ತಿಳಿವುಗಳ ಹೋಲಿಕೆ  

ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.


ಮೋವಾಬಿನ ನಿವಾಸಿಯೇ, ಕೇಳು ನಿನಗೆ ಕಾದಿದೆ ಭೀತಿ, ಗುಳಿ, ಉರುಳು! ಇದು ಸರ್ವೇಶ್ವರನ ನುಡಿ.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.


ಹಳ್ಳಗುಂಡಿಗಳು, ಭಯಭೀತಿಗಳು, ನಾಶವಿನಾಶಗಳು ನಮ್ಮ ಪಾಲಿಗೆ ಕಟ್ಟಿಟ್ಟ ಬುತ್ತಿಗಳು.


ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು