Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:20 - ಕನ್ನಡ ಸತ್ಯವೇದವು C.L. Bible (BSI)

20 ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:20
26 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ನೀನು ಅವರಿಗೆ ಹೀಗೆ ಹೇಳಬೇಕು : “ಸರ್ವೇಶ್ವರ ಇಂತೆನ್ನುತ್ತಾರೆ : ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?


ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಅಡ್ಡಾಡಿದರು, ಹೊಯ್ದಾಡಿದರು ಕುಡುಕರಂತೆ I ದಿಕ್ಕುತೋರದವರಾದರು ದಕ್ಷತೆ ಸಾಲದೆ II


ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II


ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.


ಮುಂದೆ ಬರಲಿರುವ ಕ್ಷಾಮವು ಅತ್ಯಂತ ಘೋರಾವಾಗಿರುವುದು; ಮೊದಲಿದ್ದ ಸಮೃದ್ಧಿಯ ಗುರುತೇ ಇಲ್ಲದೆ ಹೋಗುವುದು.


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು