ಯೆಶಾಯ 24:23 - ಕನ್ನಡ ಸತ್ಯವೇದವು C.L. Bible (BSI)23 ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು. ಅಧ್ಯಾಯವನ್ನು ನೋಡಿ |