Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:5 - ಕನ್ನಡ ಸತ್ಯವೇದವು C.L. Bible (BSI)

5 ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:5
49 ತಿಳಿವುಗಳ ಹೋಲಿಕೆ  

ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಹಳೆಯ ಒಡಂಬಡಿಕೆಯಲ್ಲಿ ದೇವಾರಾಧನೆಗೆ ವಿಧಿನಿಯಮಗಳಿದ್ದವು; ಮಾನವ ನಿರ್ಮಿತ ದೇವಾಲಯವೂ ಇತ್ತು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.


ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಯಕೋಬನಿಗೆ ರಾಜಶಾಸನವಾಗಿ ಕೊಟ್ಟುದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು II


ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಹೀಗೆ ಯೆಹೋಶುವ ಶೆಕೆಮಿನಲ್ಲಿ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಂಡು ಅವರಿಗೆ ವಿಧಿನಿಯಮಗಳನ್ನು ನೇಮಿಸಿದನು.


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು.


ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


ಆದ್ದರಿಂದ ಇಸ್ರಯೇಲ್ ದೇವರಾದ ಸರ್ವೇಶ್ವರ ಎಂಬ ನಾನು ಜೆರುಸಲೇಮಿನವರ ಮೇಲೂ ಜುದೇಯದವರ ಮೇಲೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಬಿರಿಯುವುವು.


ಅವರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ಪಿತೃಗಳ ಕಾಲ ಮೊದಲ್ಗೊಂಡು ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ,” ಎಂದು ಹೇಳಿಸಿದರು.


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು