Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:6 - ಕನ್ನಡ ಸತ್ಯವೇದವು C.L. Bible (BSI)

6 ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:6
28 ತಿಳಿವುಗಳ ಹೋಲಿಕೆ  

“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ನೀವೂ ನಿಮ್ಮ ಜನಾಂಗವೆಲ್ಲವೂ ನನಗೆ ಮೋಸಮಾಡುವುದರಿಂದ ನೀವೆಲ್ಲರೂ ಶಾಪಗ್ರಸ್ತರು.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಈ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು