Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:8 - ಕನ್ನಡ ಸತ್ಯವೇದವು C.L. Bible (BSI)

8 ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:8
16 ತಿಳಿವುಗಳ ಹೋಲಿಕೆ  

ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


“ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಅಳುವ ಧ್ವನಿ ಕೇಳಿಸುತ್ತಿದೆ ನನ್ನ ಕೊಳಲಿನಲಿ ಗೋಳಾಟದ ಸ್ವರವಿದೆ ನನ್ನ ಕಿನ್ನರಿಯಲಿ.”


ಆ ನಾಡಿನಲಿ ಕಿನ್ನರಿಗಳನ್ನೆ ತೂಗುಹಾಕಿದೆವು I ನೀರವಂಜಿ ಮರಗಳಿಗೆ ಅವನ್ನು ನೇತುಹಾಕಿದೆವು II


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.


ಮುದುಕರು ಇನ್ನು ಕೂರುತ್ತಿಲ್ಲ ಚಾವಡಿಗಳಲಿ ಯುವಕರು ಇನ್ನು ಹಿಡಿಯುತ್ತಿಲ್ಲ ವಾದ್ಯಗಳನ್ನು ಕೈಯಲ್ಲಿ.


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ.


ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು