Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:1
41 ತಿಳಿವುಗಳ ಹೋಲಿಕೆ  

ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


ಈ ಪರಿ ನುಡಿದಿರುವನಾ ದೇವನು : I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು