Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:10
27 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ದಿಕ್ಕುಪಾಲಾಗಿಹರು ಮದ್ಮೇನಿನ ಜನರು; ವಲಸೆ ಹೋಗಿಹರು ಗೇಬೆಮಿನ ನಿವಾಸಿಗಳು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು