Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:2 - ಕನ್ನಡ ಸತ್ಯವೇದವು C.L. Bible (BSI)

2 ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದುರ್ಗವನ್ನು ನಾಶಪಡಿಸಿ ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದ ಹಾಳೂರನ್ನಾಗಿಯೂ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:2
24 ತಿಳಿವುಗಳ ಹೋಲಿಕೆ  

ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.


ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಮೂಲೆಗಲ್ಲಿಗಾಗಲಿ, ಅಸ್ತಿವಾರದ ಕಲ್ಲಿಗಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು. ನೀನು ನಿತ್ಯನಾಶಕ್ಕೆ ಗುರಿಯಾಗುವೆ,” ಎನ್ನುತ್ತಾರೆ ಸರ್ವೇಶ್ವರ.


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.


ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.


ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.


ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು