Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:5 - ಕನ್ನಡ ಸತ್ಯವೇದವು C.L. Bible (BSI)

5 ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಮೇಘವು] ಒಣನೆಲದ ಕಾವನ್ನು ಆರಿಸುವಂತೆ ನೀನು ಅನ್ಯರ ಗದ್ದಲವನ್ನು ಅಣಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಭೀಕರರ ಉತ್ಸಾಹಗಾನವು ನಿಂತುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವೈರಿಯು ಆರ್ಭಟಿಸುತ್ತಾ ಗದ್ದಲ ಮಾಡುತ್ತಾನೆ. ಆ ಭಯಂಕರ ಶತ್ರುವು ಯುದ್ಧಕ್ಕೆ ಬಾ ಎಂದು ಸವಾಲು ಹಾಕುತ್ತಾನೆ. ಆದರೆ ದೇವರೇ, ನೀನು ಅವನನ್ನು ತಡೆಯುವೆ. ಬೇಸಿಗೆ ಕಾಲದಲ್ಲಿ ಮರುಭೂಮಿಯಲ್ಲಿರುವ ಸಸಿಗಳು ಬಾಡಿಹೋಗಿ ನೆಲದ ಮೇಲೆ ಬಿದ್ದುಹೋಗುವವು. ಅದೇ ರೀತಿಯಲ್ಲಿ ನೀನು ವೈರಿಯನ್ನು ಸೋಲಿಸಿ ಅವನು ಮೊಣಕಾಲೂರುವಂತೆ ಮಾಡುವೆ. ಕಾರ್ಮುಗಿಲು ಬೇಸಿಗೆಯ ತಾಪವನ್ನು ನಿವಾರಿಸುವದು. ಅದೇ ರೀತಿಯಲ್ಲಿ ನೀನು ಶತ್ರುವಿನ ಆರ್ಭಟವನ್ನು ನಿಲ್ಲಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ, ನೀವು ವಿದೇಶಿಯರ ಗದ್ದಲವನ್ನು ಅಡಗಿಸುವಿರಿ; ಮೋಡದ ನೆರಳಿನಿಂದ ಬಿಸಿಲು ತಡೆಯುವ ಹಾಗೆಯೇ, ನೀವು ಕ್ರೂರಿಗಳ ಉತ್ಸಾಹಗಾನವನ್ನು ನಿಲ್ಲಿಸಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:5
27 ತಿಳಿವುಗಳ ಹೋಲಿಕೆ  

ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು