Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:9 - ಕನ್ನಡ ಸತ್ಯವೇದವು C.L. Bible (BSI)

9 ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:9
53 ತಿಳಿವುಗಳ ಹೋಲಿಕೆ  

ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.


ಕಾದಿದೆ ಎನ್ನ ಮನ ಪ್ರಭುವಿಗಾಗಿ I ಆತನಿಹನು ಎನಗೆ ಗುರಾಣಿಯಾಗಿ II


ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು