ಯೆಶಾಯ 26:14 - ಕನ್ನಡ ಸತ್ಯವೇದವು C.L. Bible (BSI)14 ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |