Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:15 - ಕನ್ನಡ ಸತ್ಯವೇದವು C.L. Bible (BSI)

15 ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:15
33 ತಿಳಿವುಗಳ ಹೋಲಿಕೆ  

ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.


ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.


ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು