Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:17 - ಕನ್ನಡ ಸತ್ಯವೇದವು C.L. Bible (BSI)

17 ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ ಬೇನೆಯಿಂದ ಅರಚುವಂತೆ ಯೆಹೋವನೇ, ನಾವು ನಿನ್ನ ಮುಂದೆ ಅರಚಿದ್ದೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ ಪ್ರಸವವೇದನೆಯಿಂದ ನರಳುವ ಸ್ತ್ರೀಯರಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಗರ್ಭಿಣಿ ಸ್ತ್ರೀಯು ಹೆರುವುದಕ್ಕೆ ಸಮೀಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆಯಲ್ಲಿ ಅರಚುವಂತೆ, ಯೆಹೋವ ದೇವರೇ, ನಾವು ನಿಮ್ಮ ಸಮ್ಮುಖದಲ್ಲಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:17
11 ತಿಳಿವುಗಳ ಹೋಲಿಕೆ  

ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.


ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?


ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ನಡುಗುವಂತಾಯಿತಲ್ಲಿ ಗಡಗಡನೆ I ಪ್ರಸವ ವೇದನೆಯಂತಾಯಿತವರಿಗೆ II


ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು.


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು