Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:19 - ಕನ್ನಡ ಸತ್ಯವೇದವು C.L. Bible (BSI)

19 ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:19
37 ತಿಳಿವುಗಳ ಹೋಲಿಕೆ  

ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಈತ ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಬೇಡಿದನು. ಪಿಲಾತನು ಅದನ್ನು ಅವನಿಗೆ ಕೊಡುವಂತೆ ಅಪ್ಪಣೆಮಾಡಿದನು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ನನ್ನ ಬೇರುಗಳು ನೀರಿನವರೆಗೆ ವ್ಯಾಪಿಸಿಕೊಂಡಿವೆ ನನ್ನ ರೆಂಬೆಗಳ ಮೇಲೆ ರಾತ್ರಿಯೆಲ್ಲ ಇಬ್ಬನಿ ಬಿದ್ದಿರುತ್ತದೆ.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


ಮರದ ಬೇರು ನೆಲದಲ್ಲಿ ಮುದಿಯಾಗಿದ್ದರೂ ಅದರ ಬುಡ ಮಣ್ಣಿನಲ್ಲಿ ಸತ್ತಿದ್ದರೂ


ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು