Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:2 - ಕನ್ನಡ ಸತ್ಯವೇದವು C.L. Bible (BSI)

2 ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:2
25 ತಿಳಿವುಗಳ ಹೋಲಿಕೆ  

ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಇದುವೇ ದ್ವಾರ ಪ್ರಭುವಿನ ಮಂದಿರಕೆ I ಇದುವೇ ಪ್ರವೇಶಮಾರ್ಗ ಸಜ್ಜನರಿಗೆ II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II


ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು