Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:20 - ಕನ್ನಡ ಸತ್ಯವೇದವು C.L. Bible (BSI)

20 ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:20
34 ತಿಳಿವುಗಳ ಹೋಲಿಕೆ  

ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು