Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:21 - ಕನ್ನಡ ಸತ್ಯವೇದವು C.L. Bible (BSI)

21 ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:21
28 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ?


ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು