Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:3
34 ತಿಳಿವುಗಳ ಹೋಲಿಕೆ  

ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.


ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು?


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು