Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:4 - ಕನ್ನಡ ಸತ್ಯವೇದವು C.L. Bible (BSI)

4 ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:4
32 ತಿಳಿವುಗಳ ಹೋಲಿಕೆ  

ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು