Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:1 - ಕನ್ನಡ ಸತ್ಯವೇದವು C.L. Bible (BSI)

1 ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:1
30 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ಓಡಾಡುತ್ತವದರೊಳು ಹಡಗುಗಳು I ನೀನುಂಟುಮಾಡಿದ ತಿಮಿಂಗಿಲಗಳು II


ಆತನ ಶ್ವಾಸ ಶುಭ್ರವಾಗಿಸುತ್ತದೆ ಆಕಾಶಮಂಡಲವನು ಆತನ ಹಸ್ತ ಇರಿಯುತ್ತದೆ ಹರಿದೋಡುವ ಸರ್ಪವನು.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.


ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!


“’ಲಿವ್ಯತಾನ್’ ಮೊಸಳೆಯನು ಗಾಳದಿಂದ ಎಳೆಯಬಲ್ಲೆಯಾ? ಅದರ ನಾಲಿಗೆಯನು ಹಗ್ಗದಿಂದ ಬಿಗಿಯಬಲ್ಲೆಯಾ?


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು