Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:11 - ಕನ್ನಡ ಸತ್ಯವೇದವು C.L. Bible (BSI)

11 ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:11
39 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.


ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.


ಆತನ ಕೋಪಾಗ್ನಿಯ ನಿಮಿತ್ತ ಹಾಯಾದ ಗೋಮಾಳಗಳ ಧ್ವಂಸ!


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು