Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:12 - ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರೇ, ತುಂಬಿತುಳುಕುವ [ಯೂಫ್ರೇಟೀಸ್] ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿನ್ನನ್ನು ಒಬ್ಬೊಬ್ಬರನ್ನಾಗಿ ಆರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:12
24 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಪ್ರಭುವಿನ ನುಡಿ : “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II


ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


“ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.


ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ. ಅಚ್ಮೋನಿನ ಮೇಲೆ ಈಜಿಪ್ಟಿನ ನದಿಗೆ ಬಂದು ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಇದು ಅದರ ತೆಂಕಣ ಎಲ್ಲೆ.


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು