Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:4 - ಕನ್ನಡ ಸತ್ಯವೇದವು C.L. Bible (BSI)

4 ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:4
17 ತಿಳಿವುಗಳ ಹೋಲಿಕೆ  

ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II


ನೀವು ಸುಟ್ಟ ಸುಣ್ಣದಂತಾಗುವಿರಿ.


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು