Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:10 - ಕನ್ನಡ ಸತ್ಯವೇದವು C.L. Bible (BSI)

10 ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ [ಪ್ರಕಟಿಸುತ್ತಾನಲ್ಲಾ ಇತ್ಯಾದಿ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಚಿಕ್ಕಕೂಸುಗಳೊಂದಿಗೆ ಮಾತಾಡುವಂತೆ ಯೆಹೋವನು ಅವರ ಸಂಗಡ ಮಾತಾಡುತ್ತಾನೆ: “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:10
11 ತಿಳಿವುಗಳ ಹೋಲಿಕೆ  

ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ಆ ಮಹಿಳೆಯರಾದರೋ ಯಾರಿಗೆ ಬೇಕಾದರೂ ಕಿವಿಗೊಡುವರು. ಸತ್ಯವನ್ನು ಮಾತ್ರ ಮನಗಾಣರು.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು