Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:12 - ಕನ್ನಡ ಸತ್ಯವೇದವು C.L. Bible (BSI)

12 “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:12
14 ತಿಳಿವುಗಳ ಹೋಲಿಕೆ  

ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು