Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:13 - ಕನ್ನಡ ಸತ್ಯವೇದವು C.L. Bible (BSI)

13 ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬದಾಗಿ ಇವರಿಗೆ ಪರಿಣವಿುಸುವದು; ಇವರು ನಡೆದು ಹಿಂದೆಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಆತನ ಮಾತು ಅವರಿಗೆ ಪರಭಾಷೆಯಂತೆ ಕೇಳಿಸುವುದು. “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.” ಜನರು ತಮ್ಮ ಇಷ್ಟಪ್ರಕಾರ ನಡೆದರು. ಆದ್ದರಿಂದ ಅವರು ಸೋಲಿಸಲ್ಪಟ್ಟರು. ಅವರು ಉರುಲಿಗೆ ಸಿಕ್ಕಿ ಹಾಕಿಕೊಂಡು ಹಿಡಿಯಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:13
14 ತಿಳಿವುಗಳ ಹೋಲಿಕೆ  

ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು


ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ.


ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


“ಅವರ ಭೋಜನವೇ ಅವರಿಗೆ ಬಲೆಯೂ ಜಾಲವೂ ಆಗಲಿ ಯಾತನೆಯೂ ಪತನವೂ ಆಗಿ ಪರಿಣಮಿಸಲಿ.


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು