ಯೆಶಾಯ 28:16 - ಕನ್ನಡ ಸತ್ಯವೇದವು C.L. Bible (BSI)16 ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು. ಅಧ್ಯಾಯವನ್ನು ನೋಡಿ |