Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:18 - ಕನ್ನಡ ಸತ್ಯವೇದವು C.L. Bible (BSI)

18 ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ಪಾತಾಳದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು. “ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:18
22 ತಿಳಿವುಗಳ ಹೋಲಿಕೆ  

“ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ.


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?


“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಸಮಸ್ತ ಗುಮ್ಮಟ ಗೋಪುರಗಳಿಗೆ, ಸಮಸ್ತ ಕೋಟೆಕೊತ್ತಲಗಳಿಗೆ,


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು