Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:2 - ಕನ್ನಡ ಸತ್ಯವೇದವು C.L. Bible (BSI)

2 ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:2
21 ತಿಳಿವುಗಳ ಹೋಲಿಕೆ  

ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.


ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು