Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:25 - ಕನ್ನಡ ಸತ್ಯವೇದವು C.L. Bible (BSI)

25 ಒಮ್ಮೆ ಭೂಮಿಯನ್ನು ಹಸನುಮಾಡಿದ ಮೇಲೆ ಜೀರಿಗೆಯನ್ನು ಚೆಲ್ಲಿ, ಸದಾಪನ್ನು ಬಿತ್ತುವವನಲ್ಲವೆ? ಗೋದಿಯನ್ನು ಸಾಲುಸಾಲಾಗಿಯೂ ಬಾರ್ಲಿಯನ್ನು ತಕ್ಕ ಸ್ಥಳದಲ್ಲಿ ಬಿತ್ತಿ, ಕಡಲೆಯನ್ನು ಅಂಚಿನಲ್ಲಿ ಹಾಕುವವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಂತು ಭೂವಿುಯನ್ನು ಹಸನುಮಾಡಿದ ಮೇಲೆ ಕರಿಯ ಜೀರಿಗೆಯನ್ನು ಚೆಲ್ಲಿ ಜೀರಿಗೆಯನ್ನು ಬಿತ್ತಿ ಗೋದಿಯನ್ನು ಸಾಲು ಸಾಲಾಗಿಯೂ ಜವೆಗೋದಿಯನ್ನು ತಕ್ಕ ಸ್ಥಳದಲ್ಲಿಯೂ ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ವ್ಯವಸಾಯಗಾರನು ಮಣ್ಣನ್ನು ಹಸನುಮಾಡಿ ನಂತರ ಬೀಜ ಬಿತ್ತುವನು. ಬೇರೆಬೇರೆ ತರದ ಬೀಜಗಳನ್ನು ಬೇರೆಬೇರೆ ರೀತಿಯಲ್ಲಿ ಬಿತ್ತುವನು. ಅವನು ಗೋಧಿಯನ್ನಾಗಲಿ ಬಾರ್ಲಿಯನ್ನಾಗಲಿ ನೆಲದ ಮೇಲೆ ಬಿಸಾಡುವನು. ಗೋಧಿಯನ್ನು ಸಾಲಾಗಿ ಬಿತ್ತುವನು. ಬೇರೆಬೇರೆ ಗಿಡಗಳ ಬೀಜವನ್ನು ಬೇರೆಬೇರೆ ಸ್ಥಳಗಳಲ್ಲಿಯೂ ಬೇರೆಬೇರೆ ವಿಧಾನದಲ್ಲಿಯೂ ಬಿತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:25
5 ತಿಳಿವುಗಳ ಹೋಲಿಕೆ  

“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ?


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು