Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:29 - ಕನ್ನಡ ಸತ್ಯವೇದವು C.L. Bible (BSI)

29 ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ವಿವೇಕವು ಸಹ ಅತಿಶಯಾಲೋಚನಾಪರನೂ ಸುಜ್ಞಾನಶ್ರೇಷ್ಠನೂ ಆಗಿರುವ ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಈ ಪಾಠವು ಸರ್ವಶಕ್ತನಾದ ಯೆಹೋವನಿಂದ ಬರುತ್ತದೆ. ಆತನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:29
15 ತಿಳಿವುಗಳ ಹೋಲಿಕೆ  

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು