Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:4 - ಕನ್ನಡ ಸತ್ಯವೇದವು C.L. Bible (BSI)

4 ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವದು; ಆ ಹಣ್ಣನ್ನು ಕಂಡವನು ಕಿತ್ತ ಕೂಡಲೆ ನುಂಗಿಬಿಡುವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:4
12 ತಿಳಿವುಗಳ ಹೋಲಿಕೆ  

ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ,


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು