Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:5 - ಕನ್ನಡ ಸತ್ಯವೇದವು C.L. Bible (BSI)

5 ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನು “ಮಹಿಮಾಪೂರ್ಣವಾದ ಕಿರೀಟ”ವಾಗುವನು. ಉಳಿದಿರುವ ಆತನ ಜನರಿಗೆ ಆತನು “ಅಂದವಾದ ಪುಷ್ಪಕಿರೀಟ”ವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:5
21 ತಿಳಿವುಗಳ ಹೋಲಿಕೆ  

ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ.


ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು