Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:7 - ಕನ್ನಡ ಸತ್ಯವೇದವು C.L. Bible (BSI)

7 ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:7
33 ತಿಳಿವುಗಳ ಹೋಲಿಕೆ  

“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.


ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.


ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ಅಡ್ಡಾಡಿದರು, ಹೊಯ್ದಾಡಿದರು ಕುಡುಕರಂತೆ I ದಿಕ್ಕುತೋರದವರಾದರು ದಕ್ಷತೆ ಸಾಲದೆ II


ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.


ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.


ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


“ಸಮಾರ್ಯದ ಪ್ರವಾದಿಗಳ ಅಸಹ್ಯ ಕಾರ್ಯಗಳನ್ನು ನೋಡಿರುವೆನು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿದರವರು ಹೀಗೆ ಇಸ್ರಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದರು.


ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು : “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.


ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ಮಿಶ್ರಮದ್ಯಪಾನಗಳಲ್ಲಿ ಆಸಕ್ತನಾಗಿರುವವನೇ, ದ್ರಾಕ್ಷಾರಸ ಕುಡಿಯುತ್ತ ಕಾಲಹರಣ ಮಾಡುವವನೇ.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.


ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು