Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:9 - ಕನ್ನಡ ಸತ್ಯವೇದವು C.L. Bible (BSI)

9 ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 [ಇವರು ಹರಟಿಕೊಳ್ಳುವದೇನಂದರೆ] - ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಮಾತನ್ನು ತಿಳಿಯಪಡಿಸುತ್ತಾನೆ? ಮೊಲೆ ಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಜನರಿಗೆ ಪಾಠ ಕಲಿಸಲು ಪ್ರಯತ್ನಿಸುತ್ತಿದ್ದಾನೆ. ತನ್ನ ಬೋಧನೆಯನ್ನು ತನ್ನ ಜನರು ಅರಿತುಕೊಳ್ಳಲೆಂದು ಯೆಹೋವನು ಪ್ರಯತ್ನಿಸುತ್ತಿದ್ದಾನೆ. ಆದರೆ ಜನರು ಇನ್ನೂ ತಾಯಿ ಹಾಲು ಕುಡಿಯುವ ಚಿಕ್ಕ ಕೂಸುಗಳಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:9
21 ತಿಳಿವುಗಳ ಹೋಲಿಕೆ  

ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು