Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:14 - ಕನ್ನಡ ಸತ್ಯವೇದವು C.L. Bible (BSI)

14 ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:14
24 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ?


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು