Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:17 - ಕನ್ನಡ ಸತ್ಯವೇದವು C.L. Bible (BSI)

17 ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:17
24 ತಿಳಿವುಗಳ ಹೋಲಿಕೆ  

ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.


“ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II


ನೀಚ ನಿವಾಸಿಗಳ ಕಾರಣದಿಂದ I ನದಿಗಳನೂ ಮರುಭೂಮಿಯಾಗಿಸಿದ II


ದಾಟುವಾಗ ಬಾಕಾ ಕಣಿವೆಯನು I ಚಿಲುಮೆಗಳನಾಗಿ ಮಾಡುವರದನು II ಮುಂಗಾರು ಮಳೆಯು ಸುರಿಯಲು I ತುಂಬಿ ತುಳುಕುವುದಾ ಸರಸಿಗಳು II


ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು