Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:21 - ಕನ್ನಡ ಸತ್ಯವೇದವು C.L. Bible (BSI)

21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 (ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:21
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.


ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.


ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II


ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”


ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು