Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:23 - ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡಿಸುವ ಕೆಲಸವನ್ನು ನೋಡಿ ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾವಿುಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲ್ಯರ ದೇವರಿಗೆ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:23
18 ತಿಳಿವುಗಳ ಹೋಲಿಕೆ  

ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು