Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:24 - ಕನ್ನಡ ಸತ್ಯವೇದವು C.L. Bible (BSI)

24 ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣುಗುಟ್ಟುವವರು ಉಪದೇಶವನ್ನು ಗಮನಿಸುವರು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದ್ದರಿಂದ ಅವರು ತಪ್ಪಿಹೋದರು. ಆದರೆ ಅವರು ಪಾಠಗಳನ್ನು ಕಲಿತುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:24
19 ತಿಳಿವುಗಳ ಹೋಲಿಕೆ  

ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಆತುರಗಾರರ ಬುದ್ಧಿ ಸಾವಧಾನದಿಂದ ಗ್ರಹಿಸುವುದು. ತೊದಲುಮಾತಿನವರ ನಾಲಿಗೆ ಸ್ವಚ್ಛವಾಗಿಯೂ ತ್ವರಿತವಾಗಿಯೂ ನುಡಿಯುವುದು.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು