Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:5 - ಕನ್ನಡ ಸತ್ಯವೇದವು C.L. Bible (BSI)

5 ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗುಂಪುಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮ ದೂಳಿಯಂತೆಯೂ ತಂಡೋಪತಂಡವಾಗಿ ಬಂದಿರುವ ಭಯಂಕರರು ಹಾರಿಹೋಗುವ ಹೊಟ್ಟಿನ ಹಾಗೂ ಆಗುವರು; ತಟ್ಟನೆ ಕ್ಷಣದಲ್ಲಿ ಲಯಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:5
24 ತಿಳಿವುಗಳ ಹೋಲಿಕೆ  

ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ.


ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು.


ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.


ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


“ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.


ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು