Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:7 - ಕನ್ನಡ ಸತ್ಯವೇದವು C.L. Bible (BSI)

7 ಆಗ, ನಿನ್ನ ಮೇಲೆ ಹೋರಾಡಿ, ನಿನಗೂ ನಿನ್ನ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ನಿನ್ನನ್ನು ಬಾಧಿಸುವ ಸಕಲ ಜಾತಿಜನಾಂಗಗಳು ಕನಸಿನಂತೆ, ರಾತ್ರಿಕಾಲದ ಸ್ವಪ್ನದಂತೆ ಮಾಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ, ಮಾಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್‌ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:7
17 ತಿಳಿವುಗಳ ಹೋಲಿಕೆ  

ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಆ ದಿನದಂದು ಜೆರುಸಲೇಮಿನ ಮೇಲೆ ಬೀಳುವ ರಾಷ್ಟ್ರಗಳೆಲ್ಲವನ್ನು ನಾನೇ ಧ್ವಂಸಮಾಡುವೆನು.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು