Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:10 - ಕನ್ನಡ ಸತ್ಯವೇದವು C.L. Bible (BSI)

10 ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:10
28 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.


ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


ಸಜ್ಜನರ ತಲೆಯ ಮೇಲೆ ಆಶೀರ್ವಾದ; ದುರ್ಜನರ ಬಾಯಿ ಹಿಂಸಾಚಾರದ ಮುಚ್ಚಳ.


ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು